ಸೀರಂ ಇನ್​ಸ್ಟಿಟ್ಯೂಟ್​ನಲ್ಲಿ ವೆಲ್ಡಿಂಗ್​ ವೇಳೆ ಅಗ್ನಿ ದುರಂತ, 5 ಜನ ಸಾವು!

masthmagaa.com:

ಭಾರತದಲ್ಲಿ ಕೊರೋನಾ ಲಸಿಕೆಯ ಅಭಿಯಾನ ನಡೀತಿರುವಾಗ್ಲೇ ‘ಕೋವಿಶೀಲ್ಡ್’ ಲಸಿಕೆ ಉತ್ಪಾದಿಸುತ್ತಿರುವ ಪುಣೆಯ ಸೀರಂ ಇನ್​ಸ್ಟಿಟ್ಯೂಟ್​ ಆಫ್ ಇಂಡಿಯಾದ ಮಂಜ್ರಿ ಘಟಕದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 5 ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಅಗ್ನಿ ಅನಾಹುತಕ್ಕೆ ಕಾರಣವೇನು ಅನ್ನೋದು ಇನ್ನೂ ಸ್ಪಷ್ಟವಾಗಿಲ್ಲ. ಆದ್ರೆ ನಿರ್ಮಾಣ ಹಂತದ ಈ ಕಟ್ಟಡದಲ್ಲಿ ವೆಲ್ಡಿಂಗ್ ಕೆಲಸ ನಡೀತಿತ್ತು. ಈ ವೇಳೆ ಬೆಂಕಿ ತಗುಲಿರಬಹುದು ಅಂತ ಅಧಿಕಾರಿಗಳು ಹೇಳಿದ್ದಾರೆ. ಘಟನೆ ಸಂಬಂಧ ಮಹಾರಾಷ್ಟ್ರ ಸರ್ಕಾರ ತನಿಖೆಗೆ ಆದೇಶಿಸಿದೆ. ಇನ್ನು ಅಗ್ನಿ ಅವಘಡದಿಂದ ಕೋವಿಶೀಲ್ಡ್​ ಲಸಿಕೆ, ಅದರ ಸಂಗ್ರಹಾಗಾರ ಮತ್ತು ಉತ್ಪಾದನಾ ಘಟಕಕ್ಕೆ ಯಾವುದೇ ತೊಂದ್ರೆ ಆಗಿಲ್ಲ ಅನ್ನೋದು ಗೊತ್ತಾಗಿದೆ.

-masthmagaa.com

Contact Us for Advertisement

Leave a Reply