ಮಧ್ಯಪ್ರದೇಶದಲ್ಲಿ ಧಗಧಗನೆ ಹೊತ್ತಿ ಉರಿದ ಹೋಟೆಲ್​..!

ಇಂದೋರ್​:  ಮಧ್ಯಪ್ರದೇಶದ ಇಂದಓರ್​​​​​​ನ ಹೋಟೆಲೊಂದರಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ವಿಜಯನಗರದಲ್ಲಿರೋ ಗೋಲ್ಡನ್ ಹೋಟೆಲ್ ಇದಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಡುತ್ತಿವೆ. ಘಟನೆಯಲ್ಲಿ ಯಾವುದೇ ಸಾವು ನೋವಿನ ವರದಿಯಾಗಿಲ್ಲ. ಕಟ್ಟಡದೊಳಗೆ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ. ಇಡೀ ಹೋಟೆಲ್​ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಧಗಧಗನೆ ಉರಿಯುತ್ತಿದೆ. ಆದ್ರೆ ಅಗ್ನಿ ಅವಗಢಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

Contact Us for Advertisement

Leave a Reply