ವಂದೇ ಭಾರತ್‌ಗೆ ಬೆಂಕಿ!

masthmagaa.com:
ಮಧ್ಯಪ್ರದೇಶದ ಭೋಪಾಲ್‌ನಿಂದ ದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ ಕೋಚ್‌ ಒಂದ್ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕುರ್ವೈ ಕೆಥೋರಾ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಕೋಚ್‌ ಒಂದರ ಬ್ಯಾಟರಿ ಬಾಕ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ತಲುಪಿ ಬೆಂಕಿಯನ್ನು ಆರಿಸಿದೆ ಅಂತ ರೈಲ್ವೆ ಇಲಾಖೆ ಹೇಳಿದೆ. ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ ಹಾಗೂ ಎಲ್ಲಾ ಪ್ರಯಾಣಿಕರನ್ನ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಅಂತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

-masthmagaa.com

Contact Us for Advertisement

Leave a Reply