ಕೊರೋನಾಗೆ ದೇಶದಲ್ಲಿ ಮತ್ತೊಂದು ಬಲಿ.. ಸಾವಿನ ಸಂಖ್ಯೆ 18ಕ್ಕೆ ಏರಿಕೆ..!

masthmagaa.com:

ರಾಜಸ್ಥಾನದ ಭಿಲ್ವಾಡಾ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹಾಗೂ ಇತರ ಕಾಯಿಲೆಗಳಿಂದ ಬಳಲುತ್ತಿದ್ದ 73 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಮೂಲಕ ದೇಶದಲ್ಲಿ ಕಿಲ್ಲರ್​ ಕೊರೋನಾ ವೈರಸ್​ಗೆ ಬಲಿಯಾದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಈ ವ್ಯಕ್ತಿಗೆ ಕೊರೋನಾ ಸೋಂಕು ಇರುವುದರ ಜೊತೆಗೆ ಮಧುಮೇಹ ಹಾಗೂ ಕಿಡ್ನಿ ಸಮಸ್ಯೆ ಕೂಡ ಇತ್ತು. ಕೊರೋನಾ ಸೋಂಕಿಗೆ ರಾಜಸ್ಥಾನದಲ್ಲಿ ಸಂಭವಿಸಿದ ಮೊದಲ ಸಾವು ಇದಾಗಿದೆ.

ಮಹಾರಾಷ್ಟ್ರದಲ್ಲಿ4, ಗುಜರಾತ್​ನಲ್ಲಿ 3, ಕರ್ನಾಟಕದಲ್ಲಿ 2, ಬಿಹಾರ, ದೆಹಲಿ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಮಧ್ಯಪ್ರದೇಶ, ಪಂಜಾಬ್, ರಾಜಸ್ಥಾನ, ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಜೊತೆಗೆ ದೇಶದಲ್ಲಿ ಇದುವರೆಗೆ 725ಕ್ಕೂ ಹೆಚ್ಚು ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.

-masthmagaa.com

Contact Us for Advertisement

Leave a Reply