masthmagaa.com:

ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ನಿನ್ನೆಯಿಂದ ಧಾರಾಕಾರ ಮಳೆಯಾಗುತ್ತಿದ್ದು ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಉಡುಪಿಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು 3-4 ಹಳ್ಳಿಗಳು ಜಲಾವೃತವಾಗಿದೆ. ಈ ಹಿನ್ನೆಲೆ ಮಂಗಳೂರು ಮತ್ತು ಮೈಸೂರಿನ ಎನ್​ಡಿಆರ್​ಎಫ್ ತಂಡಗಳನ್ನು ಉಡುಪಿಗೆ ರವಾನಿಸಲಾಗಿದೆ. ರಕ್ಷಣಾ ಕಾರ್ಯಕ್ಕೆ ಒಂದು ಹೆಲಿಕಾಪ್ಟರ್ ಮೀಸಲಿಡಲಾಗಿದೆ ಅಂತ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಭಾರಿ ವರ್ಷಧಾರೆಯಿಂದಾಗಿ ನಾಳೆ ನಡೆಯಬೇಕಿದ್ದ ಮಂಗಳೂರು ಯುನಿವರ್ಸಿಟಿ ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕರಾವಳಿ ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇನ್ನು ಮಲೆನಾಡು ಭಾಗದ ಚಿಕ್ಕಮಗಳೂರು ಜಿಲ್ಲೆಯಲ್ಲೂ ನಿರಂತರವಾಗಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.

ಬೆಂಗಳೂರು ನಗರದ ಹಲವೆಡೆ ಬೆಳಗ್ಗೆಯಿಂದ ಸತತವಾಗಿ ಜಿಟಿಜಿಟಿ ಮಳೆಯಾಗುತ್ತಿದೆ.

ಇನ್ನು ಸೆಪ್ಟೆಂಬರ್ 21ರವರೆಗೂ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಅಂತ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು ಭಾಗದಲ್ಲಿ ರೆಡ್​ ಅಲರ್ಟ್​ ಘೋಷಿಸಲಾಗಿದೆ ಅಂತ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply