masthmagaa.com:

ಬೆಂಗಳೂರು: ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಮಾಜಿ ಕಾರ್ಪೊರೇಟರ್ ಅಬ್ದುಲ್ ರಕೀಬ್ ಝಾಕಿರ್​ನನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗಷ್ಟೇ ಇದೇ ಪ್ರಕರಣದಲ್ಲಿ ಬಿಬಿಎಂಪಿ ಮಾಜಿ ಮೇಯರ್ ಸಂಪತ್​ರಾಜ್​ ಅರೆಸ್ಟ್ ಆಗಿದ್ದರು. ಇದೀಗ ಅವರ ಆಪ್ತ ಝಾಕಿರ್ ಕೂಡ ಅರೆಸ್ಟ್ ಆಗಿರೋದು ತನಿಖೆ ದೃಷ್ಟಿಯಲ್ಲಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಈ ಹಿಂದೆ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದ ಝಾಕಿರ್,  ಬಳಿಕ ತಲೆಮರೆಸಿಕೊಂಡು ಓಡಾಡುತ್ತಿದ್ದ. ಸಂಪತ್​ರಾಜ್ ಮತ್ತು ಝಾಕಿರ್ ವಿರುದ್ಧ ಸಿಸಿಬಿ ಪೊಲೀಸರು ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಅಂದ್ಹಾಗೆ ಡಿ.ಜೆ. ಹಳ್ಳಿ ಠಾಣಾ ವ್ಯಾಪ್ತಿಯಲ್ಲಿರುವ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಆಗಸ್ಟ್ 11ರಂದು ರಾತ್ರಿ ನುಗ್ಗಿದ್ದ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು.

-masthmagaa.com

Contact Us for Advertisement

Leave a Reply