ಹೆಚ್ಚುವರಿ ಬಸ್‌ ಖರೀದಿಗೆ 500 ಕೋಟಿ ರೂಪಾಯಿ ಅನುದಾನ ನೀಡಿದ ರಾಜ್ಯ ಸರ್ಕಾರ!

masthmagaa.com:

ಕಾಂಗ್ರೆಸ್‌ನ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಜಾರಿಯಿಂದಾಗಿ ಬಸ್‌ಗಳು ಸಖತ್‌ ರಶ್‌ ಅಗ್ತಿದ್ದು, ಪ್ರಯಾಣಿಕರು ತೊಂದ್ರೆ ಅನುಭವಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸುಮಗಗೊಳಿಸಲು ಹೊಸ ಬಸ್ ಖರೀದಿಗೆ ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಅನುದಾನ ನೀಡಿದೆ. ಇದಕ್ಕಾಗಿ 500 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿ, ಆದೇಶ ಮಾಡಿದೆ. ನಾಲ್ಕು ಸಾರಿಗೆ ನಿಗಮಗಳಿಗೆ 500 ಕೋಟಿ ರೂಪಾಯಿ ಅನುದಾನ ನೀಡಿದೆ. ಜೊತೆಗೆ ನೂತನ ಬಸ್ ಖರೀದಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸಾರಿಗೆ ನಿಗಮಗಳಿಗೆ ಸರ್ಕಾರ ಸೂಚನೆ ನೀಡಿದೆ.

-masthmagaa,c

Contact Us for Advertisement

Leave a Reply