ನೇಕಾರರಿಗೆ ಗುಡ್‌ ನ್ಯೂಸ್‌ ಕೊಟ್ಟ ಸಿದ್ದು ಸರ್ಕಾರ: ಮಗ್ಗಗಳಿಗೆ ಫ್ರೀ ಕರೆಂಟ್‌ ಘೋಷಣೆ

masthmagaa.com:

ಆರ್ಥಿಕ ಸಂಕಷ್ಟದಲ್ಲಿರುವ ನೇಕಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ಧಿ ನೀಡಿದ್ದು, ದಸರಾ- ದೀಪಾವಳಿ ಕೊಡುಗೆಯಾಗಿ ಉಚಿತ ವಿದ್ಯುತ್ ನೀಡಲು ಆದೇಶ ಹೊರಡಿಸಿದೆ. 10HP ವರೆಗಿನ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ ತಿಂಗಳಿಗೆ ಗರಿಷ್ಠ 250 ಯುನಿಟ್‌ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಅಂತ ಸಚಿವ ಶಿವಾನಂದ ಎಸ್. ಪಾಟೀಲ ಅನೌನ್ಸ್‌ ಮಾಡಿದ್ದಾರೆ. ಜೊತೆಗೆ 10 ರಿಂದ 20HP ವರೆಗಿನ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಿಗೆ ಪ್ರತಿ ಯುನಿಟ್‌ಗೆ ₹1.25ರಂತೆ ರಿಯಾಯಿತಿ ದರದಲ್ಲಿ ಮಾಸಿಕ ಗರಿಷ್ಠ 500 ಯುನಿಟ್‌ವರೆಗೆ ವಿದ್ಯುತ್ ಪೂರೈಸಲಾಗುವುದು ಅಂತ ತಿಳಿಸಿದ್ದಾರೆ. ಇನ್ನು ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆಯಿಂದ ಮಾಸಿಕ ಅಂದಾಜು 150 ಕೋಟಿ ರೂಪಾಯಿ ಮೊತ್ತವನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ಕೈಮಗ್ಗ ಮತ್ತು ಜವಳಿ ಇಲಾಖೆಯೇ ಭರಿಸಲಿದೆ. ಈ ಯೋಜನೆ ಅನುಷ್ಠಾನದಿಂದ ರಾಜ್ಯದ ಸುಮಾರು 40 ಸಾವಿರ ನೇಕಾರರಿಗೆ ಅನುಕೂಲವಾಗಲಿದೆ ಅಂತ ಮಾಹಿತಿ ನೀಡಿದ್ದಾರೆ.

-masthmagaa.com

Contact Us for Advertisement

Leave a Reply