ಇನ್ನೂ 5 ವರ್ಷ 5 ಕೆಜಿ ಅಕ್ಕಿ ಫ್ರೀ: ಕೇಂದ್ರ ಸರ್ಕಾರ

masthmagaa.com:

ಕೇಂದ್ರ ಸರ್ಕಾರ ಬಡವರಿಗೆ ತಿಂಗಳಿಗೆ 5 ಕೆಜಿ ಉಚಿತ ಆಹಾರಧಾನ್ಯ ಒದಗಿಸೋ ಯೋಜನೆಯನ್ನ ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಅನ್ನು ಜನವರಿ 1, 2024ರಿಂದ ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ಯೋಜನೆಗೆ ಸುಮಾರು 11.8 ಲಕ್ಷ ಕೋಟಿ ರೂಪಾಯಿ ವೆಚ್ಚವಾಗಲಿದೆ ಅಂತ ತಿಳಿಸಿದ್ದಾರೆ. ಅಂದ್ಹಾಗೆ ಈ ಯೋಜನೆಯನ್ನ ಕೊನೆಯದಾಗಿ ಡಿಸೆಂಬರ್‌ 31, 2023ರವರೆಗೆ ವಿಸ್ತರಿಸಲಾಗಿತ್ತು.

-masthmagaa.com

Contact Us for Advertisement

Leave a Reply