ದಕ್ಷಿಣ ಕನ್ನಡದಲ್ಲಿ 1 ವಾರ, ಧಾರವಾಡದಲ್ಲಿ 10 ದಿನ ಲಾಕ್​ಡೌನ್..!

masthmagaa.com:

ಕೊರೋನಾ ಹಾವಳಿ ಹೆಚ್ಚಾಗಿರುವ ಹಿನ್ನೆಲೆ ಮಂಗಳವಾರ ರಾತ್ರಿ 8 ಗಂಟೆಯಿಂದ ಒಂದು ವಾರಗಳ ಕಾಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್​ಡೌನ್ ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಮತ್ತು ಧಾರವಾಡ ಜಿಲ್ಲೆಗಳನ್ನ ಲಾಕ್​ಡೌನ್ ಮಾಡಲು ನಿರ್ಧರಿಸಲಾಗಿದೆ.

ಈ ಬಗ್ಗೆ ಮಾತನಾಡಿರೋ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಜಿಲ್ಲೆಯಲ್ಲಿ ಸೋಂಕು ಹೆಚ್ಚಾಗಿರೋದ್ರಿಂದ ಗುರುವಾರ ರಾತ್ರಿಯಿಂದ ಒಂದು ವಾರ ಲಾಕ್​ಡೌನ್ ಹೇರಲಾಗುತ್ತದೆ. ಜಿಲ್ಲೆಯ ಜನರು ಒಂದು ವಾರಕ್ಕೆ ಬೇಕಾದ ಅಗತ್ಯ ವಸ್ತುಗಳನ್ನ ಖರೀದಿಸಿ ಇಟ್ಟುಕೊಳ್ಳಿ. ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸುತ್ತೇನೆ ಎಂದಿದ್ದಾರೆ.

ಮತ್ತೊಂದುಕಡೆ ಧಾರವಾಡ ಜಿಲ್ಲೆಯಲ್ಲಿ ಜುಲೈ 15ರಿಂದ ಜುಲೈ 24ರವರೆಗೆ 10 ದಿನಗಳ ಕಾಲ ಲಾಕ್​ಡೌನ್ ಜಾರಿ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಇಂದಿನಿಂದಲೇ ಅರ್ಧ ದಿನ ಲಾಕ್​ಡೌನ್ ಜಾರಿಗೊಳಿಸಲಾಗಿದೆ. ಅಂದ್ರೆ ಮಧ್ಯಾಹ್ನ 3 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಶಿವಮೊಗ್ಗ ನಗರದಲ್ಲಿ ಸಂಪೂರ್ಣ ಲಾಕ್​ಡೌನ್ ಇರಲಿದೆ.

-masthmagaa.com

Contact Us for Advertisement

Leave a Reply