ಕರ್ನಾಟಕ ರತ್ನ ಪುನೀತ್‌ ರಾಜಕುಮಾರ್‌ ಚಿತ್ರದ ಟ್ರೇಲರ್‌ಗೆ ಪ್ರಧಾನಿ ಮೋದಿ ಅಭಿನಂದನೆ!

masthmagaa.com:

ದಿವಂಗತ ನಟ, ಕರ್ನಾಟಕ ರತ್ನ ಡಾ. ಪುನೀತ್‌ ರಾಜಕುಮಾರ್‌ ಅಭಿನಯದ ಗಂಧದ ಗುಡಿ ಚಿತ್ರದ ಟ್ರೇಲರ್‌ ಇಂದು ಬಿಡುಗಡೆಯಾಗಿದೆ. ಈ ನಡುವೆ ಪ್ರಧಾನಿ ಮೋದಿ ಕೂಡ ಇದಕ್ಕೆ ಪ್ರತಿಕ್ರಿಯಿಸಿದ್ದು ಅಪ್ಪು ಚಿತ್ರಕ್ಕೆ ಶುಭ ಕೋರಿದ್ದಾರೆ. ಟ್ವೀಟ್‌ ಮಾಡಿರೊ ಅವರು ʻಪುನೀತ್ ರಾಜ್ ಕುಮಾರ್ ವಿಶ್ವದಾದ್ಯಂತ ಲಕ್ಷಾಂತರ ಮಂದಿಯ ಹೃದಯದಲ್ಲಿದ್ದಾರೆ. ಅವರೊಬ್ಬ ಪ್ರತಿಭಾವಂತ, ತೇಜಸ್ಸಿನ ವ್ಯಕ್ತಿಯಾಗಿದ್ದರು. ಗಂಧದ ಗುಡಿ ಪ್ರಕೃತಿ ಮಾತೆ, ಕರ್ನಾಟಕ ನೈಸರ್ಗಿಕ ಸೌಂದರ್ಯಕ್ಕೆ ಸಂದ ಗೌರವ. ಅವರ ಪ್ರಯತ್ನಕ್ಕೆ ಶುಭಾಷಯ ಅಂತ ಹೇಳಿದ್ದಾರೆ. ಅಂದ್ಹಾಗೆ ಈ ಚಿತ್ರದ ಟ್ರೇಲರ್‌ ಬಗ್ಗೆ ಅಪ್ಪು ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಮೋದಿಯವರನ್ನ ಟ್ಯಾಗ್‌ ಮಾಡಿ ಟ್ವೀಟ್‌ ಮಾಡಿದ್ರು. ಅದಕ್ಕೆ ಮೋದಿ ಕೂಡ ಪ್ರತಿಕ್ರಿಯಿಸಿ ಶುಭ ಹಾರೈಸಿದ್ದಾರೆ.

-masthmagaa.com

Contact Us for Advertisement

Leave a Reply