ಮಗಳ ಜೊತೆ ಅನೈತಿಕ ಸಂಬಂಧ..ಯುವಕನನ್ನು ಕೊಂದೇಬಿಟ್ಟ ಅಪ್ಪ..!

ಮಧ್ಯಪ್ರದೇಶ: ಯುವತಿಯೊಬ್ಬಳ ಜೊತೆ ಸಂಬಂಧ ಹೊಂದಿದ್ದ ಯುವಕನನ್ನು ಆಕೆಯ ತಂದೆ ಮತ್ತು ಸಹೋದರ ಸೇರಿ ಕೊಲೆ ಮಾಡಿದ್ದಾರೆ. ನಂತರ ಯುವಕನ ಮೃತದೇಹ ಮತ್ತು ಬೈಕನ್ನು ರೈಲ್ವೆ ಹಳಿ ಮೇಲೆ ಎಸೆದು ದುರ್ಘಟನೆ ಎಂದು ಬಿಂಬಿಸಲು ಯತ್ನಿಸಲಾಗಿದೆ. ಮಧ್ಯಪ್ರದೇಶದ ಸಾಗರದಲ್ಲಿ ಈ ಘಟನೆ ವರದಿಯಾಗಿದೆ. ಮೃತ ಯುವಕನನ್ನು ದಾನಿಶ್ ಖುರೈಷಿ ಎಂದು ಗುರುತಿಸಲಾಗಿದೆ. ಆದ್ರೆ ಮರಣೋತ್ತರ ಪರೀಕ್ಷೆಯಲ್ಲಿ ದಾನಿಶ್ ಕುತ್ತಿಗೆಯಲ್ಲಿ ಹಗ್ಗದ ಗುರುತು ಪತ್ತೆಯಾಗಿದೆ. ನಂತರ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಆರಂಭಿಸಿದಾಗ ಒಂದೊಂದಾಗೇ ಎಲ್ಲವೂ ಬೆಳಕಿಗೆ ಬಂದಿದೆ. ಪ್ರಕರಣದ ಮುಖ್ಯ ಆರೋಪಿ ಅಶಿಕ್​​ರನ್ನು ವಶಕ್ಕೆ ಪಡೆಯಲಾಗಿದೆ. ಆದ್ರೆ ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ಬಲೆ ಬೀಸಿದ್ದಾರೆ.

Contact Us for Advertisement

Leave a Reply