ತೆಂಗು ಬೆಳೆಗಾರರಿಗೆ ಸಿಹಿ ಸುದ್ಧಿ: ಉಂಡೆ ಕೊಬ್ಬರಿಗೆ 1,250 ರೂಪಾಯಿ ಬೆಂಬಲ ಬೆಲೆ

masthmagaa.com:

ಸಂಕಷ್ಟದಲ್ಲಿರುವ ತೆಂಗು ಬೆಳೆಗಾರರಿಗೆ ನೆರವು ನೀಡೋಕೆ ರಾಜ್ಯ ಸರ್ಕಾರ ಮುಂದಾಗಿದೆ. ಪ್ರತಿ ಕ್ವಿಂಟಲ್ ಉಂಡೆ ಕೊಬ್ಬರಿಗೆ 1,250 ರೂಪಾಯಿ ಬೆಂಬಲ ಬೆಲೆ ನೀಡೋದಾಗಿ ಘೋಷಣೆ ಮಾಡಿದೆ. ಸದನದಲ್ಲಿ ಕೊಬ್ಬರಿ ಬೆಲೆ ಕುಸಿತ ಚರ್ಚೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿರೋ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವ್ರು, ಇಂದಿನಿಂದ ಕೊಬ್ಬರಿ ಖರೀದಿಗೆ 1,250 ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು ಅಂತ ಹೇಳಿದ್ದಾರೆ. ಜೊತೆಗೆ ಈ ಹಿಂದಿನ ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಮಾರಾಟ ಮಾಡಿದವರಿಗೆ ಇದು ಅನ್ವಯ ಆಗಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಅಂದ್ಹಾಗೆ ಕೇಂದ್ರ ಸರ್ಕಾರ ಪ್ರತಿ ಕ್ವಿಂಟಾಲ್‌ ಕೊಬ್ಬರಿಗೆ 11,750 ರೂಪಾಯಿ ಬೆಂಬಲ ಬೆಲೆ ನಿಗದಿ ಪಡಿಸಿದೆ. ಇದರ ಜೊತೆಗೆ ರಾಜ್ಯಸರ್ಕಾರ 1,250 ರೂಪಾಯಿ ಪ್ರೋತ್ಸಾಹ ಧನ ನೀಡಲಿದೆ ಅಂತ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply