BBMP ಚುನಾವಣೆಗೆ ಮತ್ತೆ 3 ತಿಂಗಳ ಕಾಲಾವಕಾಶ ಕೇಳಿದ ಸರ್ಕಾರ!

masthmagaa.com:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮತ್ತೆ 3 ತಿಂಗಳ ಕಾಲಾವಕಾಶ ನೀಡುವಂತೆ ಹೈಕೋರ್ಟ್‌ಗೆ ಮನವಿ ಮಾಡಿದೆ. ಬಿಬಿಎಂಪಿಯ 243 ವಾರ್ಡ್‌ಗಳಿಗೆ ನವೆಂಬರ್ 30ರೊಳಗೆ ಮೀಸಲಾತಿ ನಿಗದಿಪಡಿಸಿ, ಡಿಸೆಂಬರ್ 31ರೊಳಗೆ ಚುನಾವಣೆ ನಡೆಸಬೇಕು ಅಂತ ಸೆಪ್ಟೆಂಬರ್ 30ರಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿತ್ತು. ಇದೀಗ ಹೈಕೋರ್ಟ್‌ನ ಈ ಆದೇಶವನ್ನು ನವೆಂಬರ್ 30ರಿಂದ ಅನ್ವಯವಾಗುವಂತೆ ಮುಂದಿನ ಮೂರು ತಿಂಗಳಿಗೆ ವಿಸ್ತರಿಸಬೇಕು ಅಂತ ರಾಜ್ಯ ಸರ್ಕಾರ ಮನವಿ ಮಾಡಿದೆ.

-masthmagaa.com

Contact Us for Advertisement

Leave a Reply