ಪಠ್ಯಪುಸ್ತಕ ಪರಿಷ್ಕರಣೆಗೆ ಸರ್ಕಾರ ಬದ್ಧವಾಗಿದೆ: ಸಚಿವ ಮಧು ಬಂಗಾರಪ್ಪ

masthmagaa.com:

ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ರೆಡಿಯಿದೆ ಅಂತ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವ್ರು ಹೇಳಿದ್ದಾರೆ. ನಾನು ನಮ್ಮ ಪಕ್ಷದ ಪ್ರಣಾಳಿಕೆಯ ಉಪಾಧ್ಯಕ್ಷನಾಗಿದ್ದೆ. ಪ್ರಣಾಳಿಕೆಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಅದರಂತೆ ಮಕ್ಕಳ ಚಿಂತನೆ ಕಲ್ಮಶವಾಗಬಾರದು ಹಾಗೂ ವಿದ್ಯಾಭ್ಯಾಸದಲ್ಲಿ ತೊಂದ್ರೆ ಆಗ್ಬಾರ್ದು. ಹಾಗಾಗಿ ಪ್ರಸ್ತುತ ಪಠ್ಯಪುಸ್ತಕಗಳಲ್ಲಿನ ತಪ್ಪುಗಳನ್ನ ಸರ್ಕಾರದ ಕಡೆಯಿಂದ ಹಾಗೂ ನನ್ನ ಕಡೆಯಿಂದ ಸರಿ ಮಾಡೋ ಕೆಲಸ ಮಾಡಲಾಗುತ್ತೆ ಅಂತ ಹೇಳಿದ್ದಾರೆ. ಈಗಾಗಲೇ ಸಿಎಂ ನಿರ್ದೇಶನದಂತೆ ತಂಡವೊಂದನ್ನುರಚನೆ ಮಾಡಲಾಗುತ್ತಿದೆ. ಇನ್ನೆರಡು ದಿನಗಳಲ್ಲಿ ತಂಡ ರಚನೆಯಾಗಲಿದೆ ಜೂನ್.1ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಈ ಬಗ್ಗೆ ಸಭೆ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ. ಪಠ್ಯಪುಸ್ತಕದಲ್ಲಿನ ಎಲ್ಲವನ್ನು ಕೂಡ ಪರಿಶೀಲನೆ ಮಾಡಿ, ಮಕ್ಕಳ ಭವಿಷ್ಯಕ್ಕೆ, ಮಕ್ಕಳ ಚಿಂತನೆಗೆ, ಅವಶ್ಯಕತೆ ಇರುವ ವಿದ್ಯಾಭ್ಯಾಸ ಬಿಟ್ಟು ಬೇರೆ ಏನಾದರೂ ಇದ್ದರೆ ಅದನ್ನು ಸಿಎಂ ಗಮನಕ್ಕೆ ತಂದು ಬದಲಾವಣೆ ಮಾಡಲಾಗುತ್ತದೆ ಅಂತ ಮಧು ಬಂಗಾರಪ್ಪ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply