ನಾಳೆಯಿಂದ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ವಿಳಂಬ!

masthmagaa.com:

ಮನೆ ಯಜಮಾನಿಗೆ 2000 ರೂ ನೀಡುವ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಆರಂಭವಾಗಬೇಕಿದ್ದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನ ಮುಂದೂಡಲಾಗಿದೆ ಅಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಈ ಮೊದಲು ಆನ್‌ಲೈನ್‌ ಹಾಗೂ ಆಫ್‌ಲೈನ್‌ ಎರಡರಲ್ಲೂ ನಾಳೆಯಿಂದ ಅರ್ಜಿ ಸಲ್ಲಿಸಬಹುದು ಅಂತ ಲಕ್ಷ್ಮೀ ಹೆಬ್ಬಾಳ್ಕರ್​ ಘೋಷಣೆ ಮಾಡಿದ್ರು. ಆದ್ರೆ ಇದೀಗ ಮಹಿಳೆಯರಿಗೆ ತೊಂದರೆಯಾಗಬಾರ್ದು ಅಂತ ಒಂದು ಮೊಬೈಲ್‌ ಅಪ್ಲಿಕೇಶನ್‌ ಸಿದ್ಧಪಡಿಸಲಾಗ್ತಿದೆ. ಇ-ಆಡಳಿತದವ್ರು ಮೊಬೈಲ್‌ ಅಪ್ಲಿಕೇಶನ್‌ಗೆ 2 ದಿನ ಕೇಳಿದ್ರು, ಇದೀಗ 4 ದಿನ ಕಾಲಾವಕಾಶ ಕೇಳಿದ್ದಾರೆ. ಆ್ಯಪ್‌ ಕುರಿತು ಬಾಪೂಜಿ ಕೇಂದ್ರ, ನಾಡ ಕಚೇರಿ ಸಿಬ್ಬಂದಿಗೆ ತರಬೇತಿ ಕೊಡಬೇಕಾಗುತ್ತೆ. ಹಾಗಾಗಿ ಅರ್ಜಿ ಸಲ್ಲಿಕೆ ನಾಲ್ಕೈದು ದಿನ ಲೇಟ್‌ ಆಗಲಿದೆ ಅಂತ ಹೇಳಿದ್ದಾರೆ. ಇನ್ನು ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರಲ್ಲ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ ಅಂತ ಸ್ಪಷ್ಟಪಡಿಸಿದ್ದಾರೆ. ಇತ್ತ ಗೃಹಜ್ಯೋತಿ ಯೋಜನೆಯಡಿ ನೋಂದಣಿ ಪ್ರಕ್ರಿಯೆಯನ್ನ ಜೂನ್ 18ರಂದು ಪ್ರಾರಂಭಿಸಲಾಗುತ್ತೆ ಅಂತ ಸರ್ಕಾರ ತಿಳಿಸಿದೆ. ಈ ಯೋಜನೆ ಪಡೆಯಲು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‌ನಲ್ಲಿ ವಿಶೇಷ ಕಸ್ಟಮ್-ನಿರ್ಮಿತ ಪುಟದ ಅಡಿಯಲ್ಲಿ ನೋಂದಾಯಿಸಿಕೊಳ್ಳಬೇಕು ಅಂತ ಮಾಹಿತಿ ನೀಡಿದೆ.

-masthmagaa.omm

Contact Us for Advertisement

Leave a Reply