53 ಸಾವಿರ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ ʻಗೃಹಲಕ್ಷ್ಮಿʼ ಹಣ! ಯಾಕೆ?

masthmagaa.com:

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ 53 ಸಾವಿರ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಿಲ್ಲ. ಹೀಗಾಗಿ ಪ್ರತಿನಿತ್ಯ ಮಹಿಳೆಯರು, ಬ್ಯಾಂಕು, ಸೇವಾ ಕೇಂದ್ರಗಳಿಗೆ ಅಲೆದಾಡುವಂತಾಗಿದೆ ಅಂತ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ಬ್ಯಾಂಕ್ ಖಾತೆ ಸಂಖ್ಯೆ ತಪ್ಪಾಗಿದ್ದರೆ, ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ಜೋಡಣೆ ಆಗಿರದಿದ್ದರೆ, ಬ್ಯಾಂಕ್ ಖಾತೆ ನಿಷ್ಕ್ರಿಯವಾಗಿದ್ದರೆ ಮತ್ತು ಬೇರೆ ಬೇರೆ ತಾಂತ್ರಿಕ ಕಾರಣಗಳಿಂದ ಹಣ ಪಾವತಿ ಆಗುವುದಿಲ್ಲ. ಹೀಗಾಗಿ ಹಣ ಜಮಾ ಆಗದವರು ತಮ್ಮ ಬ್ಯಾಂಕ್ ಖಾತೆ ಮತ್ತು ದಾಖಲೆಗಳನ್ನು ಪುನರ್ ಪರಿಶೀಲಿಸಿಕೊಳ್ಳಬೇಕು ಅಂತ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply