ಹರಿಯಾಣದಲ್ಲಿ ಕಾಂಗ್ರೆಸ್‍ಗೆ ದೊಡ್ಡ ಹಿನ್ನಡೆ..!

ಹರಿಯಾಣ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‍ಗೆ ದೊಡ್ಡ ಹೊಡೆತ ಬಿದ್ದಿದೆ. ಹರಿಯಾಣ ಕಾಂಗ್ರೆಸ್‍ನ ಮಾಜಿ ಅಧ್ಯಕ್ಷ ಅಶೋಕ್ ತನ್ವರ್ ಪಕ್ಷ ಬಿಟ್ಟಿದ್ದಾರೆ. ಅಲ್ಲದೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಟಿಕೆಟ್ ಹಂಚಿಕೆ ವೇಳೆ ಇವರ ವಿರುದ್ಧ ಗಂಭೀರ ಆರೋಪ ಕೇಳಿಬಂದಿತ್ತು. ಇವರು ಕೋಟಿಗಟ್ಟಲೆ ದುಡ್ಡಿಗೆ ಟಿಕೆಟ್ ಮಾರಾಟ ಮಾಡ್ತಾರೆ ಅಂತ ಹೇಳಲಾಗಿತ್ತು. ಹೀಗಾಗಿ ಅವರು ಪಕ್ಷವನ್ನೇ ತೊರೆಯಲು ನಿರ್ಧರಿಸಿದ್ದಾರೆ. ತಮ್ಮ ಟ್ವಿಟ್ಟರ್ ಅಕೌಂಟ್‍ನಲ್ಲಿ ರಾಜೀನಾಮೆ ಬಗ್ಗೆ ಅಶೋಕ್ ತನ್ವರ್ ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದು ತಮ್ಮನ್ನು ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸುವಂತೆಯೂ ಮನವಿ ಮಾಡಿದ್ದರು. ಇದೇ ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದ್ದು, ಹರಿಯಾಣದಲ್ಲಿ ಕಾಂಗ್ರೆಸ್‍ಗೆ ದೊಡ್ಡ ಹಿನ್ನೆಡೆ ಅಂತಲೇ ಹೇಳಲಾಗುತ್ತಿದೆ.

Contact Us for Advertisement

Leave a Reply