ಹರಿಯಾಣದಲ್ಲಿ ಅತಂತ್ರ ಫಲಿತಾಂಶ..? ಅಮಿತ್ ಶಾ ರಣತಂತ್ರ ಶುರು..!

ಹರಿಯಾಣ ವಿಧಾನಸಭೆ ಚುನಾವಣೆ ಮತ ಎಣಿಕೆ ಜಾರಿಯಲ್ಲಿದೆ. ಆರಂಭದಲ್ಲಿ ಭಾರಿ ಮುನ್ನಡೆ ಸಾಧಿಸಿದ್ದ ಬಿಜೆಪಿ ಈಗ ಅಲ್ಪಮತದತ್ತ ಕುಸಿಯುತ್ತಿದೆ. ಅಂದ್ರೆ ಬಿಜೆಪಿ, ಕಾಂಗ್ರೆಸ್​ ನಡುವೆ ಭಾರಿ ಪೈಪೋಟಿ ನಡೆಯುತ್ತಿದೆ. ಹೀಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಮ್ಮೆಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿ, ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದಾರೆ.

ಹರಿಯಾಣ ವಿಧಾನಸಭೆ ಫಲಿತಾಂಶದಲ್ಲಿ ಭಾರಿ ಏರಿಳಿತಳಾಗ್ತಿದ್ದು, ಬಿಜೆಪಿ ಹೈಕಮಾಂಡ್ ದೃಷ್ಟಿ ಇಟ್ಟಿದೆ. ಫಲಿತಾಂಶ ಪ್ರಕಟವಾದ ಬಳಿಕವೇ ಮೈತ್ರಿ ಬಗ್ಗೆ ಎಚ್ಚರಿಕೆಯ ಹೆಜ್ಜೆ ಇಡಲು ಅಮಿತ್ ಶಾ ಪ್ಲಾನ್ ಮಾಡಿದ್ಧಾರೆ. ಅವರು ಇವತ್ತು ಗ್ರೇಟರ್ ನೋಯ್ಡಾದಲ್ಲಿ ಐಟಿಬಿಪಿಯ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಹೊರಟಿದ್ದರು. ಆದ್ರೆ ಕೊನೆ ಕ್ಷಣದಲ್ಲಿ ಈ ಕಾರ್ಯಕ್ರಮಕ್ಕೆ ಅಮಿತ್ ಶಾ ಗೈರಾಗಿದ್ದಾರೆ.

ಹರಿಯಾಣದಲ್ಲಿ ಅಕ್ಟೋಬರ್ 21ರಂದು ಚುನಾವಣೆ ನಡೆದಿತ್ತು. ಒಟ್ಟು 90 ವಿಧಾನಸಭೆ ಕ್ಷೇತ್ರಗಳಿದ್ದು, ಬಹುಮತಕ್ಕೆ 46 ಕ್ಷೇತ್ರಗಳ ಅಗತ್ಯವಿದೆ.

Contact Us for Advertisement

Leave a Reply