ಹಾಸನ: ಮಾಜಿ ಸಚಿವ ಹೆಚ್.ಡಿ.ರೇವಣ್ಣನ ಅತ್ಯಾಪ್ತ, ಗ್ರಾನೈಟ್ ಉದ್ಯಮಿ ಬರ್ಬರ ಹತ್ಯೆ

masthmagaa.com:

ಹಾಸನ ಜಿಲ್ಲೆಯಲ್ಲಿ ಹಾಡಹಗಲೇ ಗ್ರಾನೈಟ್‌ ಉದ್ಯಮಿಯೊಬ್ಬರ ಬರ್ಬರ ಹತ್ಯೆಯಾಗಿದೆ. ಮೃತ ಉದ್ಯಮಿ ಕೃಷ್ಣೇಗೌಡ ಅವರು ಜೆಡಿಎಸ್‌ ಮುಖಂಡ, ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಅವರ ಅತ್ಯಾಪ್ತರಾಗಿದ್ರು ಎನ್ನಲಾಗಿದೆ. ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೃಷ್ಣಗೌಡರನ್ನ ಅಡ್ಡಗಟ್ಟಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಎಸ್​ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

-masthmagaa.com

Contact Us for Advertisement

Leave a Reply