ಸ್ವಾಮೀಜಿಯ ಫೋನ್ ಟ್ಯಾಪ್ ಆಗಿದೆ ಎಂದಿದ್ದಕ್ಕೆ ನೋವಾಗಿದೆ: ಎಚ್‍ಡಿಕೆ

ಹಿಂದಿನ ಸರ್ಕಾರದಲ್ಲಿ ಆದಿಚುಂಚನಗಿರಿ ಸ್ವಾಮೀಜಿಗಳ ಫೋನ್ ಕೂಡ ಟ್ಯಾಪ್ ಆಗಿತ್ತು ಅನ್ನೋ ವಿಚಾರಕ್ಕೆ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರೋ ಅವರು, ನನ್ನ ಅವಧಿಯಲ್ಲಿ ಆದಿಚುಂಚನಗಿರಿ ಶ್ರೀಗಳ ಫೋನ್ ಕೂಡ ಟ್ಯಾಪ್ ಆಗಿತ್ತು ಎಂಬ ವರದಿಗಳು, ಅದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಹೇಳಿಕೆಗಳು ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿವೆ. ಎಲ್ಲಕ್ಕೂ ಮಿಗಿಲಾಗಿ ಸ್ವಾಮೀಜಿಗಳಲ್ಲಿ ಮೂಡಿರಬಹುದಾದ ಬೇಸರ ನನ್ನ ನೋವನ್ನು ಹೆಚ್ಚಿಸಿದೆ ಎಂದಿದ್ದಾರೆ. ಅಲ್ಲದೆ ನಿರ್ಮಲಾನಂದರು ನನಗೆ ನೈತಿಕವಾಗಿ ಬಲವಾಗಿದ್ದವರು, ತಮ್ಮ ಸಾಮಾಜಿಕ ಕಾರ್ಯಗಳ ನೆರಳಲ್ಲಿ ನನಗೆ ಮಾರ್ಗದರ್ಶನ ಮಾಡಿದವರು, ನನಗಾಗಿ ಕಾಲಭೈರವನಲ್ಲಿ ಪ್ರಾರ್ಥಿಸಿದವರು. ಅವರ ವಿಚಾರದಲ್ಲಿ ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ..? ಖಂಡಿತ ಇಲ್ಲ ಎಂದಿದ್ದಾರೆ.

ಇನ್ನು ಈ ಪ್ರಕರಣದಲ್ಲಿ ಅನಗತ್ಯವಾಗಿ ನನ್ನ ಹೆಸರು ಪ್ರಸ್ತಾಪಿಸಲಾಗಿದೆ. ಸಂಭವಿಸದ ತಪ್ಪೊಂದಕ್ಕೆ ಅಶೋಕ್ ಅವರು ಎಲ್ಲರಿಗಿಂತಲೂ ಮುಂದೆ ಹೋಗಿ ಕ್ಷಮೆ ಕೇಳಿದ್ದಾರೆ. ಇದರಿಂದ ಅವರಿಗೇನು ಲಾಭವೋ ಗೊತ್ತಿಲ್ಲ. ಅವರ ಆತುರಕ್ಕೆ ಮರುಕವಿದೆ. ಅದೇ ಹೊತ್ತಲ್ಲೇ ಶ್ರೀಗಳಿಗಾಗುತ್ತಿರುವ ಬೇಸರಕ್ಕೆ ಅತೀವ ನೋವಿದೆ ಎಂದು ಟ್ವೀಟ್ ಮಾಡಿದ್ದಾರೆ.

Contact Us for Advertisement

Leave a Reply