ಮತದಾನಕ್ಕೂ ಹೀಟ್‌ ವೆವ್‌ ಎಫೆಕ್ಟ್‌! ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ!

masthmagaa.com:

ರಾಜ್ಯದ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯೊ ಹೊತ್ತಲ್ಲೆ ಪ್ರಬಲ ಹೀಟ್‌ ವೇವ್‌ ಇರಲಿದೆ ಅಂತ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಹೇಳಿದೆ. ಪ್ರಮುಖವಾಗಿ ಉತ್ತರ ಕರ್ನಾಟಕದ ಬೆಳಗಾವಿ, ಹಾವೇರಿ ಸೇರಿದಂತೆ ಆರು ಜಿಲ್ಲೆಗಳಲ್ಲಿ 42ರಿಂದ 44 ಡಿಗ್ರಿ ತಾಪಮಾನ ಇರಲಿದ್ದು, ಈಗಾಗ್ಲೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಈ ಬಗ್ಗೆ ಚುನಾವಣಾ ಆಯೋಗದ ಅಧಿಕಾರಿಗಳು ಕೂಡ ಮುನ್ನಚ್ಚರಿಕೆ ಕ್ರಮಗಳನ್ನ ಕೈಗೊಂಡಿದ್ದು, ಹೆಚ್ಚಿನ ಮತದಾನದ ನಿರೀಕ್ಷೆಯಲ್ಲಿದ್ದಾರೆ ಅಂತ ಗೊತ್ತಾಗಿದೆ.

ಇನ್ನು ರಾಜ್ಯದಲ್ಲಿ ಮೇ 6ರಿಂದ 10ರವರೆಗೆ ಉತ್ತಮ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಹೇಳಿದೆ. ಮೇ 6ರಂದು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಕಡೆಗಳಲ್ಲಿ ಶಾಖದ ಅಲೆ ಹೆಚ್ಚಿರಲಿದೆ ಅಂತ ಇಲಾಖೆ ತಿಳಿಸಿದೆ.

-masthmagaa.com

Contact Us for Advertisement

Leave a Reply