ರಾಜ್ಯದ ಹಲವೆಡೆ ಮಳೆ! ದೆಹಲಿಗೆ ಯೆಲ್ಲೋ ಅಲರ್ಟ್‌ ಘೋಷಣೆ!

masthmagaa.com:

ರಾಜ್ಯದ ಹಲವು ಕಡೆ ಇವತ್ತೂ ಮಳೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟದಲ್ಲಿ ಅತಿಹೆಚ್ಚು ಅಂದ್ರೆ 169.5 ಮಿಲಿ ಮೀಟರ್‌ ಮಳೆಯಾಗಿದೆ. ಇನ್ನು ಬೆಂಗಳೂರಿನಲ್ಲಿ ಸುಮಾರು 150 ದಿನಗಳ ಬಳಿಕ ಮೊದಲ ಸಲ ಮಳೆಯಾಗಿದೆ. ಮದ್ಯಾಹ್ನ ಮತ್ತು ಸಂಜೆಯ ಹೊತ್ತಿಗೆ ನಗರದ ಹಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಮುಂದಿನ 24ಗಂಟೆಗಳಲ್ಲಿ ಅಂದ್ರೆ ಏಪ್ರಿಲ್‌ 21ನೇ ತಾರೀಖು ಗುಡುಗು ಸಹಿತ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗದಲ್ಲೂ ಸಾಧಾರಣ ಮಳೆಯಾಗಲಿದೆ.. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ಹೇಳಿದೆ. ಇನ್ನೊಂದ್‌ ಕಡೆ ಪ್ರವಾಹದಿಂದ ತತ್ತರಿಸಿ ಹೋಗಿರೋ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ IMD ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ರಾಜ್ಯದ ಬಹತೇಕ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಜಾರಿ ಮಾಡಿದೆ.

-masthmagaa.com

Contact Us for Advertisement

Leave a Reply