ರಾಜ್ಯದಲ್ಲಿ ಮುಂದುವರೆದ ಮಳೆ.! ದಕ್ಷಿಣದ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್‌!

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮಣ್ಣಹಳ್ಳಿ ಎಂಬಲ್ಲಿ ಅತಿಹೆಚ್ಚು 88 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವೊಂದು ಕಡೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳ ಬಹುತೇಕ ಕಡೆ ಸಾಧರಣೆ ಮಳೆಯಾಗುವ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

-masthmagaa.com

Contact Us for Advertisement

Leave a Reply