ಇಂದಿನಿಂದ 3 ದಿನ ರಾಜ್ಯದಲ್ಲಿ ಭಾರಿ ಮಳೆ: ಭಾರತೀಯ ಹವಾಮಾನ ಇಲಾಖೆ

masthmagaa.com:

ನವಂಬರ್‌ ತಿಂಗಳು ಮುಗಿಯುತ್ತಾ ಬಂದ್ರೂ ರಾಜ್ಯದಲ್ಲಿ ವರ್ಷಧಾರೆ ಕಡಿಮೆಯಾಗಿಲ್ಲ. ಇಂದಿನಿಂದ ಮತ್ತೆ ವರುಣನ ಆರ್ಭಟ ಹೆಚ್ಚಾಗೊ ನಿರೀಕ್ಷೆಯಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ 3 ದಿನ ಭಾರಿ ಮಳೆಯಾಗೊ ಸಾಧ್ಯತೆಯಿದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರೊ ಹಿನ್ನಲೆಯಲ್ಲಿ ಬೆಂಗಳೂರು ಮಾತ್ರವಲ್ದೇ, ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಅನೇಕ ಕಡೆ ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ನವಂಬರ್‌ 24ರವರೆಗೆ ಮಳೆ ಸುರಿಯುವ ಸಾಧ್ಯತೆಯಿದೆ. ಇನ್ನೊಂದ್‌ ಕಡೆ ಬೆಂಗಳೂರಿನಲ್ಲಿ 13.9 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ಇದು ಕಳೆದ 10 ವರ್ಷಗಳಲ್ಲೇ ನವೆಂಬರ್‌ನಲ್ಲಿ ದಾಖಲಾದ ಅತಿ ಕಡಿಮೆ ತಾಪಮಾನ ಅಂತ ಹವಾಮಾನ ಇಲಾಖೆ ತಿಳಿಸಿದೆ.

-masthmagaa.com

Contact Us for Advertisement

Leave a Reply