ರಾಜ್ಯದಲ್ಲಿ ಇಂದಿನಿಂದ ಜೂನ್‌ 15ರವರೆಗೆ ಭಾರಿ ಮಳೆ!

masthmagaa.com:

ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರೋ ಚಂಡಮಾರುತ ʻಬಿಪರ್‌ಜಾಯ್‌ʼ ಇಂದು ತೀವ್ರ ಸ್ವರೂಪ ಪಡೆದುಕೊಂಡಿದೆ. ಜೂನ್‌ 15ರಂದು ಗುಜರಾತ್‌ನ ಕಛ್‌ ಹಾಗೂ ಪಾಕಿಸ್ತಾನದ ಕರಾಚಿಗೆ ಅಪ್ಪಳಿಸಲಿದೆ ಅಂತ ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಪೂರ್ವ- ಮಧ್ಯ ಅರಬ್ಬಿ ಸಮುದ್ರದಲ್ಲಿ ಬಿಪರ್‌ಜಾಯ್‌ ಪ್ರಬಲಗೊಂಡಿದ್ದು, ಅತ್ಯಂತ ತೀವ್ರ ಸ್ವರೂಪದ ಚಂಡಮಾರುತವಾಗಿ ಮಾರ್ಪಟ್ಟಿದೆ. ಕಳೆದ 6 ಗಂಟೆಗಳಲ್ಲಿ 9 ಕಿಲೋಮೀಟರ್‌ ವೇಗದಲ್ಲಿ ಚಲಿಸುತ್ತಿದೆ. ಅಲ್ದೆ ಈ ಚಂಡಮಾರುತ ಚಲಿಸೋ ಮಾರ್ಗ ಹಾಗೂ ಅದರ ತೀವ್ರತೆಯನ್ನ ಪ್ರೆಡಿಕ್ಟ್‌ ಮಾಡೋಕೆ ಸಾಧ್ಯವಾಗ್ತಿಲ್ಲ. ಹೀಗಾಗಿ ಈ ಚಂಡಮಾರುತ ನಿರ್ದಿಷ್ಟವಾಗಿ ಯಾವ ಪ್ರದೇಶಕ್ಕೆ ಅಪ್ಪಳಿಸಲಿದೆ ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ ಅಂತ ಹವಾಮಾನ ಇಲಾಖೆ ಅಧಿಕಾರಿಯೊಬ್ರು ತಿಳಿಸಿದ್ದಾರೆ. ಇತ್ತ ರಾಜ್ಯಕ್ಕೆ ಈಗಾಗಲೇ ಮುಂಗಾರು ಮಳೆ ಪ್ರವೇಶಿಸಿದ್ದು, ಇಂದಿನಿಂದ ಜೂನ್​ 15ರವರೆಗೆ ಭಾರಿ ಮಳೆ ಸುರಿಯಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ತಿಳಿಸಿದೆ.

-masthmagaa.com

Contact Us for Advertisement

Leave a Reply