ತುಮಕೂರಿನಲ್ಲಿ ಅತಿಹೆಚ್ಚು ಮಳೆ! ಹವಾಮಾನ ವರದಿ ಇಲ್ಲಿದೆ ನೋಡಿ!

masthmagaa.com:

ರಾಜ್ಯದಲ್ಲಿ ವರ್ಷಧಾರೆ ಆಗ್ತಾಯಿದ್ದು ಕಳೆದ 24 ಗಂಟೆಯಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಎಸ್‌ ಕೊಡಗೀಹಳ್ಳಿ ಅನ್ನೋ ಕಡೆ ಅತಿಹೆಚ್ಚು ಅಂದ್ರೆ 128ಮಿಮೀ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಕಡಿಮೆ ಮಳೆಯಾಗೋ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ಚಾಮರಾಜನಗರ, ಮೈಸೂರು, ಕೊಡಗು, ಹಾಸನ, ರಾಮನಗರ, ಬೆಂಗಳೂರು ನಗರ, ಬೆಂಗಳುರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ವಿಜಯನಗರ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

-masthmagaa.com

Contact Us for Advertisement

Leave a Reply