ರಾಜ್ಯ ಕರಾವಳಿಯಲ್ಲಿ ಮುಂದಿನ 5 ದಿನ ಭಾರಿ ಮಳೆ!

masthmagaa.com:

ರಾಜ್ಯದಲ್ಲಿ ಮುಂಗಾರು ಮಳೆ ಅಷ್ಟಾಗಿ ಅಬ್ಬರಿಸುತ್ತಿಲ್ಲ ಆದ್ರೆ ಕರಾವಳಿ ಜಿಲ್ಲೆಗಳಲ್ಲಿ ಮಾತ್ರ ವರುಣ ಆರ್ಭಟ ಮುಂದುವರೆದಿದೆ. ಸುಮಾರು ಮೂರು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಮುಂದಿನ ಐದು ದಿನ ಕರಾವಳಿ ಭಾಗದಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಜಿಲ್ಲೆಗಳು ಸೇರಿದಂತೆ ರಾಜ್ಯದ ಕೆಲವು ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ 24 ಗಂಟೆಯಲ್ಲಿ ಉತ್ತರ ಕನ್ನಡ, ಚಿಕ್ಕಮಗಳೂರು, ಶೃಂಗೇರಿ, ಸಿದ್ದಾಪುರ, ತಾಳಗುಪ್ಪ, ಪೆಣಂಬೂರು, ಮಂಗಳೂರು, ದಕ್ಷಿಣ ಕನ್ನಡ ಸೆರಿದಂತೆ ಕರಾವಳಿ ಭಾಗದಲ್ಲಿಯೇ ಅತ್ಯಧಿಕ ಮಳೆ ದಾಖಲಾಗಿದೆ. ಉಳಿದ ಹಲವೆಡೆ ಸಾಧಾರಣ ಮಳೆಯಾಗಿದೆ. ಇನ್ನು ಕಲಬುರಗಿಯಲ್ಲಿ ರಾಜ್ಯದ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಬಾಗಲಕೋಟೆಯಲ್ಲಿ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.

-masthmagaa.com

Contact Us for Advertisement

Leave a Reply