ರಾಜ್ಯದಲ್ಲಿ ಮುಂದುವರೆದ ಮಳೆ! ಎಲ್ಲೆಲ್ಲಿ?

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಅಮ್ತಾಡಿ ಎಂಬಲ್ಲಿ ಅತಿಹೆಚ್ಚು 191.5 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗಗಳ ಬಹುತೇಕ ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾದ್ಯತೆ ಇದೆ. ಉತ್ತರ ಒಳನಾಡಿನ ಕೆಲವೊಂದು ಕಡೆ ಸಾಧರಣ ಮಳೆಯಾಗುವ ಸಾಧ್ಯತೆಯಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು, ಕೆಲ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಮತ್ತು ಆರೆಂಜ್‌ ಅಲರ್ಟ್ ಘೋಷಿಸಿದೆ.

-masthmagaa.com

Contact Us for Advertisement

Leave a Reply