ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: ಹವಾಮಾನ ಇಲಾಖೆ

masthmagaa.com:

ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗಿದೆ ಅಂತ ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ಮಳೆಯಾಗುತ್ತಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ತಿಳಿಸಿದೆ.

-masthmagaa.com

Contact Us for Advertisement

Leave a Reply