ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಗಿದೆ? ಹವಾಮಾನ ಹೇಗಿದೆ?

masthmagaa.com:

ಇನ್ನು ಮಳೆ ವಿಚಾರಕ್ಕೆ ಬಂದ್ರೆ.. ಕಳೆದ 24 ಗಂಟೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ಅತಿಹೆಚ್ಚು 69 ಮಿಲಿ ಮೀಟರ್​ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳ ಕೆಲವೊಂದು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳ ಬಹುತೇಕ ಕಡೆ ಸಾಧಾರಣ ಮಳೆ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮನ್ಸೂಚನೆ ನೀಡಿದೆ.

-masthmagaa.com

Contact Us for Advertisement

Leave a Reply