ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆ ಮುನ್ಸೂಚನೆ..!

masthmagaa.com:

ಕರ್ನಾಟಕದಲ್ಲಿ ಮಳೆಯ ಆರ್ಭಟ ಮುಂದುವರೆಯಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 10ರಿಂದ 13ರವರೆಗೆ ಭಾರಿ ಮಳೆಯಾಗಲಿದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅದ್ರಲ್ಲೂ ಸೆಪ್ಟೆಂಬರ್ 10 ಮತ್ತು 11ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ ಮುಂತಾದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ದಿನಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆಯೂ ಎಚ್ಚರಿಕೆ ನೀಡಲಾಗಿದೆ.

-masthmagaa.com

Contact Us for Advertisement

Leave a Reply