ಕೆಂಪೇಗೌಡ ಏರ್ಪೋರ್ಟ್‌ನಲ್ಲಿ 100 ಕೋಟಿ ಮೌಲ್ಯದ ನಶಾ ಸಾಮಾಗ್ರಿ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ!

masthmagaa.com:

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾದಕ ವಸ್ತು ಕಳ್ಳಸಾಗಣೆ ಮಾಡುತ್ತಿದ್ದ ತೆಲಂಗಾಣ ಮೂಲದ ವ್ಯಕ್ತಿಯನ್ನ ಅಧಿಕಾರಿಗಳು ಬಂಧಿಸಿದ್ದಾರೆ. ಬಳಿಕ ಆತನಿಂದ ಅಂದಾಜು 100 ಕೋಟಿ ರೂ. ಮೌಲ್ಯದ ನಿಷೇಧಿತ ನಶಾ ಸಾಮಾಗ್ರಿಯನ್ನ ವಶಕ್ಕೆ ಪಡೆದಿದ್ದಾರೆ. ಇಥಿಯೋಪಿಯಾದ ಅಡಿಸ್‌ ಅಬಾಬಾ ಸಿಟಿಯಿಂದ ಬೆಂಗಳೂರಿಗೆ ಬಂದಿದ್ದ 45 ವರ್ಷದ ವ್ಯಕ್ತಿಯ ಬ್ಯಾಗಲ್ಲಿ ಈ ನಶಾ ಸಾಮಗ್ರಿ ಕಂಡು ಬಂದಿದೆ.ಈ ಆರೋಪಿ ದೆಹಲಿ ಮೂಲದ ಮತ್ತೊಬ್ಬ ವ್ಯಕ್ತಿಗೆ ಇದನ್ನ ಹಸ್ತಾಂತರಿಸೋಕೆ ಮುಂದಾಗಿದ್ದ ಅಂತ ಹೇಳಲಾಗಿದೆ.

-masthmagaa.com

Contact Us for Advertisement

Leave a Reply