ಮೇ 30ರ ಹೆಲ್ತ್​​ ಬುಲೆಟಿನ್: ದೇಶದಲ್ಲಿ ಎಲ್ಲ ದಾಖಲೆ ಮುರಿದ ಕೊರೋನಾ

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 7,964 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಒಂದೇ ದಿನದಲ್ಲಿ ಇಷ್ಟು ಜನರಿಗೆ ಸೋಂಕು ತಗುಲಿರೋದು ಇದೇ ಮೊದಲು. ಮೇ 29ರಂದು ಅಂದ್ರೆ ನಿನ್ನೆ 7,466 ಜನರಿಗೆ ಕಾಯಿಲೆ ಹರಡಿತ್ತು. ಈಗ ಅದು 8 ಸಾವಿರ ಹತ್ರತ್ರ ಹೋಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,73,763ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೋಬ್ಬರಿ 265 ಜನ ಮೃತಪಟ್ಟಿದ್ದಾರೆ. ಒಂದೇ ದಿನದಲ್ಲಿ ಈ ಪ್ರಮಾಣದ ಕೊರೋನಾ ಸೋಂಕಿತರು ಮೃತಪಟ್ಟಿರೋದು ಇದೇ ಮೊದಲು. ಮೇ 5ರಂದು 199 ಮಂದಿ ಮೃತಪಟ್ಟಿದ್ದರು. ಈ ಮೂಲಕ ಒಟ್ಟು ಮೃತಪಟ್ಟವರ ಸಂಖ್ಯೆ 4,971 ಆಗಿದೆ. ಸದ್ಯ 82,370 ಮಂದಿ ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ 86,422 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಬರೋಬ್ಬರಿ 62 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ತಮಿಳುನಾಡಿನಲ್ಲಿ 20 ಸಾವಿರ, ದೆಹಲಿಯಲ್ಲಿ 17 ಸಾವಿರ ಮತ್ತು ಗುಜರಾತ್​ನಲ್ಲಿ 15 ಸಾವಿರಕ್ಕೂ ಹೆಚ್ಚು ​ ಪ್ರಕರಣಗಳು ದೃಢಪಟ್ಟಿವೆ. ರಾಜ್ಯವಾರು ಪಟ್ಟಿಯಲ್ಲಿ ಕರ್ನಾಟಕ 11ನೇ ಸ್ಥಾನದಲ್ಲಿದೆ.

-masthmagaa.com

Contact Us for Advertisement

Leave a Reply