ಮೇ 31ರ ಹೆಲ್ತ್​ ಬುಲೆಟಿನ್: ದೇಶದಲ್ಲಿ ದಾಖಲೆಯ 8 ಸಾವಿರ ಜನರಿಗೆ ಸೋಂಕು

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 8,380 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಒಂದೇ ದಿನದಲ್ಲಿ ಇಷ್ಟು ಜನರಿಗೆ ಸೋಂಕು ತಗುಲಿರೋದು ಇದೇ ಮೊದಲು. ಮೇ 30ರಂದು ಅಂದ್ರೆ ನಿನ್ನೆ ದಾಖಲೆಯ 7,964 ಜನರಿಗೆ ಸೋಂಕು ತಗುಲಿತ್ತು. ಈಗ ಅದು 8 ಸಾವಿರ ಗಡಿ ದಾಟಿ ಹೋಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,82,143ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೋಬ್ಬರಿ 193 ಜನ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಮೃತಪಟ್ಟ ಸೋಂಕಿತರ ಸಂಖ್ಯೆ 5 ಸಾವಿರ ಗಡಿ ದಾಟಿದ್ದು 5,164 ಆಗಿದೆ. ಸದ್ಯ 86,984 ಮಂದಿ ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ 89,995 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಬರೋಬ್ಬರಿ 65 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ತಮಿಳುನಾಡಿನಲ್ಲಿ 21 ಸಾವಿರ, ದೆಹಲಿಯಲ್ಲಿ 18 ಸಾವಿರ ಮತ್ತು ಗುಜರಾತ್​ನಲ್ಲಿ 16 ಸಾವಿರಕ್ಕೂ ಹೆಚ್ಚು​ ಪ್ರಕರಣಗಳು ದೃಢಪಟ್ಟಿವೆ. ರಾಜ್ಯವಾರು ಪಟ್ಟಿಯಲ್ಲಿ ಕರ್ನಾಟಕ 11ನೇ ಸ್ಥಾನದಲ್ಲಿದೆ.

-masthmagaa.com

Contact Us for Advertisement

Leave a Reply