ಭಾರಿ ಮಳೆಗೆ ಹಿಮಾಚಲ ಪ್ರದೇಶ ತತ್ತರ, 29 ಮಂದಿ ಸಾವು!

masthmagaa.com:

ಹಿಮಾಚಲ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಎರಡು ಪ್ರತ್ಯೇಕ ಘಟನೆಗಳಲ್ಲಿ 29 ಮಂದಿ ಮೃತಪಟ್ಟಿದ್ದಾರೆ ಅಂತ ಅಲ್ಲಿನ ಸಿಎಂ ಸುಖ್ವಿಂದರ್ ಸಿಂಗ್ ತಿಳಿಸಿದ್ದಾರೆ. ಶಿಮ್ಲಾದ ಸಮ್ಮರ್ ಹಿಲ್ ಪ್ರದೇಶದಲ್ಲಿ 20 ರಿಂದ 25 ಮಂದಿ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ. ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ ಪ್ರದೇಶಗಳಲ್ಲಿ ಅನಾವಶ್ಯಕವಾಗಿ ಓಡಾಡದಂತೆ ಜನರಲ್ಲಿ ಮನವಿ ಮಾಡುತ್ತೇನೆ. ಮಳೆ ಕಡಿಮೆಯಾದ ಕೂಡಲೇ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲಾಗುವುದು ಅಂತ ಸಿಂಗ್ ಹೇಳಿದ್ದಾರೆ. ಅಂದ್ಹಾಗೆ ಸೋಲನ್‌ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿ, ಕಂದಘಾಟ್ ಉಪ ವಿಭಾಗದ ಜಾಡೋನ್ ಗ್ರಾಮಕ್ಕೆ ನೀರು ನುಗ್ಗಿದೆ. ಇದರಿಂದಾಗಿ 7 ಮಂದಿ ಮೃತಪಟ್ಟಿದ್ದು, 3 ಜನ ನಾಪತ್ತೆಯಾಗಿದ್ದಾರೆ. ಮತ್ತೊಂದ್‌ ಕಡೆ ಶಿಮ್ಲಾದ ಸಮ್ಮರ್ ಹಿಲ್ ಪ್ರದೇಶದ ಶಿವ ದೇವಾಲಯದ ಬಳಿ ಭೂಕುಸಿತ ಸಂಭವಿಸಿ 9 ಮಂದಿ ಸಾವಿಗೀಡಾಗಿದ್ದಾರೆ. ಇನ್ನು ಸೋಲನ್‌ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಶಿಮ್ಲಾ-ಚಂಡೀಗಢ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

-masthmagaa.com

Contact Us for Advertisement

Leave a Reply