ಮೋದಿ ಅವರನ್ನು ನಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್‌ಗೆ ಹೋಲಿಸಿ ಉದ್ಧವ್ ಠಾಕ್ರೆ ಟೀಕೆ!

masthmagaa.com:

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್‌ಗೆ ಹೋಲಿಸಿದ್ದಾರೆ. ಶಿವಸೇನೆ ಸಂಸ್ಥಾಪನಾ ದಿನದ ಮುನ್ನಾ ದಿನ ಮುಂಬೈನಲ್ಲಿ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಉದ್ಧವ್ ಠಾಕ್ರೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸುತ್ತಾ, ಹಿಟ್ಲರ್ ಕೂಡ ಹೀಗೆಯೇ, ಅವನ ಆರಂಭವೂ ಇದೇ ಆಗಿತ್ತು. ಮೊದಲು ಮಾಧ್ಯಮವನ್ನ ನಿಯಂತ್ರಿಸಿದನು. ನಂತರ ಅಧಿಕಾರವನ್ನು ಕೇಂದ್ರೀಕರಿಸಿದನು. ನಾವು ಹಿಟ್ಲರನ ಮಾರ್ಗವನ್ನು ಅನುಸರಿಸುತ್ತಿದ್ದೇವೆಯೇ? ಅಂತ ಪ್ರಶ್ನಿಸಿದ್ದಾರೆ. ಅಂದ್ಹಾಗೆ ಇತ್ತೀಚೆಗೆ ರೈತರ ಪ್ರತಿಭಟನೆ ವೇಳೆ ಸಾಮಾಜಿಕ ಮಾಧ್ಯಮಗಳೆಲ್ಲಾ ಸರ್ಕಾರದ ಒತ್ತಡಕ್ಕೆ ಒಳಗಾಗಿತ್ತು ಅಂತ ಟ್ವಿಟರ್ ಮಾಜಿ ಸಿಇಒ ಜಾಕ್ ಡಾರ್ಸಿ ಅವರ ಹೇಳಿಕೆ ಬೆನ್ನಲ್ಲೇ, ಠಾಕ್ರೆ ಈ ರೀತಿ ಹೇಳಿಕೆ ನೀಡಿದ್ದಾರೆ.

-masthmagaa.com

Contact Us for Advertisement

Leave a Reply