ʻಲಕ್‌ ಸಿನಿಮಾದಲ್ಲಿ ನಾನು ನಟಿಸುತ್ತಿಲ್ಲʼ ; ಸ್ಪಷ್ಟನೆ ಕೊಟ್ಟ ಡಾಲಿ ಧನಂಜಯ್‌ !

masthmagaa.com:

ನಟ ಡಾಲಿ ಧನಂಜಯ್‌ ʻಲಕ್‌ʼ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದು ಇತ್ತೀಚೆಗೆ ಸುದ್ದಿ ಆಗಿತ್ತು. ಸ್ವತಃ ಚಿತ್ರತಂಡದವರೆ ಪತ್ರಿಕಾಗೋಷ್ಥಿಯಲ್ಲಿ ‘ನಮ್ಮ ಚಿತ್ರದಲ್ಲಿ ಧನಂಜಯ್ ಅತಿಥಿ ಪಾತ್ರ ಮಾಡುತ್ತಿದ್ದಾರೆ’ ಎಂದು ಹೇಳಿದ್ದರು. ಇದೀಗ ಡಾಲಿ ಧನಂಜಯ್‌ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಧನಂಜಯ್ ಮಾತನಾಡಿ, ‘ಲಕ್ ಚಿತ್ರದ ನಾಯಕ ಮತ್ತು ನಿರ್ಮಾಪಕ ಸ್ಮೈಲ್ ಮಂಜು ಜೊತೆ ಒಳ್ಳೆಯ ಗೆಳೆತನ ಇದೆ. ನಾವಿಬ್ಬರೂ ಒಳ್ಳೆಯ ಸ್ನೇಹಿತರು. ಅವರ ಪ್ರಯತ್ನಗಳಿಗೆ ನನ್ನ ಬೆಂಬಲ ಇರುತ್ತದೆ. ಲಕ್ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ್ದೆ. ಆದರೆ, ನನಗೆ ಅವರ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಲು ಸಾಧ್ಯವಾಗುತ್ತಿಲ್ಲ. ಈ ವಿಷಯವನ್ನು ಚಿತ್ರತಂಡದವರಿಗೂ ಮನವರಿಕೆ ಮಾಡಿಕೊಟ್ಟಿದ್ದೇನೆ. ಲಕ್ ಚಿತ್ರದಲ್ಲಿ ನಾನು ನಟಿಸುತ್ತಿಲ್ಲ ಎಂದು ಈ ಮೂಲಕ ಮತ್ತೊಮ್ಮೆ ಸ್ಪಷ್ಟಪಡಿಸುತ್ತಿದ್ದೇನೆ’ ಎಂದು ಅವರು ಹೇಳಿದ್ದಾರೆ.

-masthmagaa.com

Contact Us for Advertisement

Leave a Reply