ಜೆಡಿಎಸ್‌ನಿಂದ ಇಬ್ರಾಹಿಂ ಔಟ್‌! ನನ್ನನ್ನ ಕೆಣಕಿದ್ದೀರಿ ಅನುಭವಿಸ್ತೀರಿ ಎಂದ ಇಬ್ರಾಹಿಂ!

masthmagaa.com:

ಹಲವು ದಿನಗಳಿಂದ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಅಪಸ್ವರ ಎತ್ತಿದ್ದ ಸಿ.ಎಂ. ಇಬ್ರಾಹಿಂ ಅವರನ್ನ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ. ಜೆಡಿಎಸ್ ಕಚೇರಿಯಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಸಿ.ಎಂ. ಇಬ್ರಾಹಿಂ ಉಚ್ಚಾಟನೆಗೆ ಕೋರ್ ಕಮಿಟಿ ಸದಸ್ಯರಿಂದ ಒತ್ತಾಯ ಹೇರಲಾಗಿತ್ತು. ಸಭೆಯ ಬಳಿಕ ಇಬ್ರಾಹಿಂ ಉಚ್ಚಾಟಣೆಗೆ ನಿರ್ಧಾರ ಕೈಗೊಳ್ಳಲಾಗಿದೆ.

‘ನಮ್ಮದು ಒಂದೇ ಪಕ್ಷ ನಾವು ಬಿಜೆಪಿ ಪರ ನಿಲ್ಲುವುದಿಲ್ಲ’ ಅಂತ ಹೇಳುವ ಮೂಲಕ ಪಕ್ಷದ ವಿರುದ್ಧ ಬಂಡಾಯವೆದ್ದ ಸಿ.ಎಂ. ಇಬ್ರಾಹಿಂ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಬೇಕು ಅನ್ನೋ ಕೂಗು ಕೇಳಿ ಬಂದಿತ್ತು. ಇದರ ಬೆನ್ನಲ್ಲೆ ಪಕ್ಷ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಜೊತೆಗೆ ಸದ್ಯದ ಮಟ್ಟಿಗೆ ತಾತ್ಕಾಲಿಕವಾಗಿ ಹೆಚ್‌ ಡಿ ಕುಮಾರಸ್ವಾಮಿ ಅವರನ್ನ ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಈ ವೇಳೆ ಮಾತನಾಡಿದ ಹೆಚ್‌ ಡಿ ಕುಮಾರಸ್ವಾಮಿ “ಪಕ್ಷದ ಸಂಘಟನೆ ದೃಷ್ಟಿಯಿಂದ ದಸರಾ ನಂತರ ಹಲವಾರು ನಿರ್ಣಯ ಕೈಗೊಳ್ಳಲಿದ್ದೇವೆ. ಇಂದು ನಡೆದ ಸಭೆಯಲ್ಲಿ JDSನ 19 ಶಾಸಕರ ಪೈಕಿ 18 ಶಾಸಕರು, ರಾಜ್ಯದ ಎಲ್ಲಾ ಜಿಲ್ಲೆಗಳ ಅಧ್ಯಕ್ಷರು ಆಗಮಿಸಿ ಸಲಹೆ ನೀಡಿದ್ದರು. ಸದಸ್ಯರ ಸಲಹೆ ಆಧರಿಸಿಯೇ ರಾಜ್ಯಾಧ್ಯಕ್ಷ ಸ್ಥಾನ ನಿರ್ವಹಿಸುವೆ. ವಿಧಾನಸಭಾ ಚುನಾವಣೆಯಲ್ಲಿ ಸೋಲಿನಿಂದ ಆಘಾತಕ್ಕೊಳಗಾಗಿದ್ದೆವು. ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಲು ನಿರ್ಧರಿಸಿದ್ದೇವೆ” ಅಂತ ಹೇಳಿದ್ದಾರೆ. ಇತ್ತವಿಷಯ ತಿಳಿಯುತ್ತಿದ್ದಂತೆ ರಿಯಾಕ್ಟ್‌ ಮಾಡಿರೋ ಸಿ.ಎಂ.ಇಬ್ರಾಹಿಂ ಸಹ “ಅವರಿಗೆ ನನ್ನನ್ನು ತೆಗೆಯುವ ಅಧಿಕಾರ ಇಲ್ಲ. ಕಾರ್ಯಕಾರಿ ಸಮಿತಿಯ 2/3 ಸದಸ್ಯರ ಅನುಮತಿ ಪಡೆದು ನನಗೆ ನೋಟಿಸ್ ನೀಡಬೇಕು. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಏನಿರುತ್ತದೆ ಅಂತ ಕಾದು ನೋಡಿ” ಅಂತ ಗುಡುಗಿದ್ದಾರೆ.

-masthmagaa.com

Contact Us for Advertisement

Leave a Reply