masthmagaa.com:

ನೂತನ ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ರೈತ ಸಂಘಟನೆಗಳ ನಡುವೆ ಇವತ್ತು 4ನೇ ಸುತ್ತಿನ ಸಭೆ ನಡೆಯುತ್ತಿದೆ. ದೆಹಲಿಯ ವಿಗ್ಯಾನ್ ಭವನದಲ್ಲಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ನೇತೃತ್ವದಲ್ಲಿ ಈ ಸಭೆ ನಡೆಯುತ್ತಿದ್ರೆ, ಅತ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸದಲ್ಲಿ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಮತ್ತು ಅಮಿತ್ ಶಾ ಮಾತುಕತೆ ನಡೆಸುತ್ತಿದ್ದಾರೆ. ಮತ್ತೊಂದುಕಡೆ ದೆಹಲಿ ಮತ್ತು ಹರಿಯಾಣದ ರಸ್ತೆಗಳಲ್ಲಿ ರೈತರ ಪ್ರತಿಭಟನೆ ಮುಂದುವರದಿದೆ. ನಮ್ಮ ಬೇಡಿಕೆಗಳನ್ನ ಈಡೇರಿಸದಿದ್ದರೆ ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​ನಲ್ಲಿ ಭಾಗವಹಿಸ್ತೀವಿ ಅಂತ ರೈತ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. ಈ ಎಲ್ಲಾ ಬೆಳವಣಿಗೆಗಳು ಸಾಕಷ್ಟು ಕುತೂಹಲ ಕೆರಳಿಸಿವೆ. ಇವತ್ತಾದ್ರೂ ಸಮಸ್ಯೆ ಬಗೆಹರಿಯುತ್ತಾ? ರೈತರು ಪ್ರತಿಭಟನೆಯನ್ನ ವಾಪಸ್ ಪಡೀತಾರಾ? ಕೇಂದ್ರ ಸರ್ಕಾರವೇ ಕೃಷಿ ಕಾಯ್ದೆಗಳಿಗೆ ಏನಾದ್ರೂ ತಿದ್ದುಪಡಿ ತರುತ್ತಾ? ಅನ್ನೋದನ್ನ ಕಾದು ನೋಡಬೇಕಿದೆ.

-masthmagaa.com

Contact Us for Advertisement

Leave a Reply