ಅವತ್ತು ಅಮಿತ್‌ ಶಾ ಮಾತು ಕೇಳಿದ್ರೆ 5 ವರ್ಷ ಸಿಎಂ ಅಗಿರ್ತಿದ್ದೆ: ಕುಮಾರಸ್ವಾಮಿ

masthmagaa.com:

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ವಿಚಾರ ಅಧಿಕೃತವಾಗಿ ಹೊರ ಬೀಳ್ತಿದ್ದಂಗೆ ಉಭಯ ಪಕ್ಷಗಳಲ್ಲಿನ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಅಸಮಾಧಾನ ಹೊರಹಾಕುತ್ತಿದ್ದಾರೆ. ಇದೀಗ ಯಶವಂತಪುರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳ ಸ್ಥಳೀಯ ನಾಯಕರು ಇಂದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಇತ್ತ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಆದ ತಕ್ಷಣ ಮುಸ್ಲಿಮರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ನಾನಿನ್ನೂ ಬದುಕಿದ್ದೇನೆ, ಮುಸ್ಲಿಂ ಸಮುದಾಯವನ್ನ ನಮ್ಮ ಜೊತೆ ಉಳಿಸಿಕೊಳ್ಳುತ್ತೇವೆ. ಈ ಬಗ್ಗೆ ಯಾವ ಆತಂಕ ಕೂಡ ಬೇಡ ಅಂತ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೇಳಿದ್ದಾರೆ. ಜೊತೆಗೆ ಈ ಮೈತ್ರಿ ಮಾಡಿಕೊಳ್ಳುವಂತೆ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ಸಲಹೆ ನೀಡಿದ್ದು ನಾನೇ ಅಂತ ದೇವೇಗೌಡರು ಹೇಳಿದ್ದಾರೆ. ಇದೇ ವೇಳೆ ಮಾತಾಡಿರುವ ಕುಮಾರಸ್ವಾಮಿ, 2018 ರಲ್ಲಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ,‌ಡಿಕೆ ಶಿವಕುಮಾರ್, ಪರಮೇಶ್ವರ್ ಇದ್ರು. ನಮ್ಮ ಪಕ್ಷಕ್ಕೆ ನನ್ನ ಮಗನಿಗೆ ಸಿಎಂ ಸ್ಥಾನ ಬೇಡ ಎಂದು ದೇವೇಗೌಡ್ರು ಹೇಳಿದ್ದರು. ಇಲ್ಲ ಕುಮಾರಸ್ವಾಮಿ ಸಿಎಂ ಆಗಬೇಕು ಅಂತ ಕಾಂಗ್ರೆಸ್ ಕೇಂದ್ರ ನಾಯಕರು ಹೇಳಿದ್ರು. ಇನ್ನೊಂದೆಡೆ ಅವತ್ತೇ ಮಧ್ಯಾಹ್ನ 2 ಗಂಟೆ ಅಮಿಶ್ ಶಾ ಕಾಲ್ ಮಾಡಿದ್ರು. ಅವತ್ತೇ ನಾನು ಒಪ್ಪಿದ್ರೆ ಐದು ವರ್ಷಗಳ ಸಿಎಂ ಆಗುತ್ತಿದ್ದೆ. ಆದ್ರೆ, ದೇವೇಗೌಡರ ನಿರ್ಧಾರಕ್ಕೆ ಬದ್ಧನಾಗಿ ಕಾಂಗ್ರೆಸ್​ ಜೊತೆ ಹೋದೆ ಅಂತ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply