ಆಗಸ್ಟ್ ​​​- ಸೆಪ್ಟೆಂಬರ್​​ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ!

masthmagaa.com:

ರಾಜ್ಯದ ಕರವಾಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದ್ದು, ಮಲೆನಾಡು ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಕಳೆದ 24 ಗಂಟೆಗಳಲ್ಲಿ ಉತ್ತರಕನ್ನಡ ಜಿಲ್ಲೆಯ ಸೂಪ ತಾಲೂಕಿನ ಕ್ಯಾಸಲ್​ರಾಕ್​ನಲ್ಲಿ ಅತಿಹೆಚ್ಚು 48 ಮಿಲಿ ಮೀಟರ್ ಮಳೆಯಾಗಿದೆ ಅಂತಾನೂ ತಿಳಿಸಿದೆ. ಇನ್ನು ಈ ಬಾರಿ ಮಳೆಗಾಲದ ದ್ವಿತೀಯಾರ್ಧದಲ್ಲಿ ಅಂದ್ರೆ ಆಗಸ್ಟ್​​-ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಅಂತ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

-masthmagaa.com

Contact Us for Advertisement

Leave a Reply