ಭಾರೀ ಮಳೆ.. ರಾಜ್ಯದ ಈ 4 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್!

masthmagaa.com:

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಬೆಂಗಳೂರಿನಲ್ಲಿ ನಿನ್ನೆ ರಾತ್ರಿಯಿಡೀ ಮಳೆ ಸುರಿದಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಅತಿಹೆಚ್ಚು ಮಳೆಯಾಗಿದ್ದು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಕುಟ್ರುಪಾಡಿ ಗ್ರಾಮದಲ್ಲಿ, 94.5 ಮಿಲಿ ಮೀಟರ್​. ಬೆಂಗಳೂರಿನಲ್ಲಿ ಅತಿಹೆಚ್ಚು ಮಳೆಯಾಗಿದ್ದು ಬೆಂಗಳೂರು ಪಶ್ಚಿಮದ ಶಿವನಗರದಲ್ಲಿ, 61 ಮಿಲಿ ಮೀಟರ್​. ಇನ್ನು ಮುಂದಿನ 24 ಗಂಟೆಯಲ್ಲಿ, ರಾಜ್ಯದ ಕೆಲವೊಂದುಕಡೆ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಬಹುತೇಕ ಕಡೆ ಸಣ್ಣ ಅಥವಾ ಮಧ್ಯಮ ಪ್ರಮಾಣದ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಣ್ಣ ಅಥವಾ ಮಧ್ಯಮ ಪ್ರಮಾಣದ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್​ ಅಲರ್ಟ್​ ಘೋಷಿಸಿದೆ.

-masthmagaa.com

Contact Us for Advertisement

Leave a Reply