ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಯ್ತು..?

masthmagaa.com:

ರಾಜ್ಯದ ಕೆಲವೊಂದು ಕಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಹಾಸನ ಜಿಲ್ಲೆ ಆಲೂರು ತಾಲೂಕಿನ ದೊಡ್ಡಕಣಗಲ್​​ನಲ್ಲಿ ಅತಿಹೆಚ್ಚು ಅಂದ್ರೆ ಜಸ್ಟ್ 9 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ, ದಕ್ಷಿಣ ಒಳನಾಡು ಮತ್ತು ಮಳೆನಾಡು ಜಿಲ್ಲೆಗಳ ಕೆಲವೊಂದು ಕಡೆ ಭಾರಿ ಮಳೆ, ಬಹುತೇಕ ಕಡೆ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳ ಬಹುತೇಕ ಕಡೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳ ಕೆಲವೊಂದು ಕಡೆ ಸಣ್ಣ ಪ್ರಮಾಣದ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

-masthmagaa.com

Contact Us for Advertisement

Leave a Reply