ರಾಜ್ಯದ ಇವತ್ತಿನ ಹವಾಮಾನ ವರದಿ ಹೀಗಿದೆ ನೋಡಿ..

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ನಗರಬಸ್ತಿಕೇರಿ ಎಂಬಲ್ಲಿ ಅತಿಹೆಚ್ಚು 147 ಮಿಲೀ ಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಪ್ರದೇಶದಲ್ಲಿ ಸಾಧಾರಣ ಮಳೆ.. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶದ ಕೆಲವೆಡೆ ಸಣ್ಣ ಪ್ರಮಾಣದ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.

-masthmagaa.com

Contact Us for Advertisement

Leave a Reply