ಹವಾಮಾನ ವರದಿ: ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

masthmagaa.com:

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಇವತ್ತು ಉತ್ತಮ ಮಳೆಯಾಗಿದೆ. ಬೆಂಗಳೂರಿನ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶಂಕರ್ ಶಾನ್​​ಭೋಗ್​ ಎಂಬಲ್ಲಿ ಅತಿಹೆಚ್ಚು 94 ಮಿಲಿ ಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಕಡೆ ಸಾಧರಣ ಮಳೆ ಮತ್ತು ಕೆಲವೊಂದು ಕಡೆ ಉತ್ತಮ ಮಳೆಯಾಗಲಿದೆ. ಮಲೆನಾಡು ಜಿಲ್ಲೆಗಳ ಬಹುತೇಕ ಕಡೆ ಸಾಧರಣ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವೊಂದು ಕಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

-masthmagaa.com

Contact Us for Advertisement

Leave a Reply