ಒಕ್ಕಲಿಗ ಮೀಸಲಾತಿಯನ್ನ ಶೇ.15ಕ್ಕೆ ಏರಿಸಲು ಸರ್ಕಾರಕ್ಕೆ ಗಡುವು!

masthmagaa.com:

ಒಕ್ಕಲಿಗ ಮೀಸಲಾತಿ ಹೆಚ್ಚಳ ಮಾಡ್ಬೇಕು ಅಂತ ಕೋರಿ ಸಚಿವ ಆರ್‌ ಅಶೋಕ್‌ ಮೂಲಕ ರಾಜ್ಯ ಸರ್ಕಾರಕ್ಕೆ ಸಮುದಾಯ ಮನವಿ ನೀಡಿದೆ. ಈ ಕುರಿತು ಬೆಂಗಳೂರಿನ ವಿಶ್ವೇಶ್ವರ ಪುರದಲ್ಲಿರೊ ರಾಜ್ಯ ಒಕ್ಕಲಿಗರ ಸಂಘದ ಆವರಣದಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದೆ. ಕರ್ನಾಟಕದಲ್ಲಿ ಒಕ್ಕಲಿಗ ಸಮುದಾಯದ ಜನಸಂಖ್ಯೆ 19 ರಿಂದ 20% ಇದೆ. ಇಷ್ಟು ದೊಡ್ಡ ಸಮುದಾಯಕ್ಕೆ ಶೇ.4 ರಷ್ಟು ಮಾತ್ರವೇ ಮೀಸಲಾತಿ ಸಿಕ್ಕಿದೆ. ಇದನ್ನ ಶೇ.15ಕ್ಕೆ ಹೆಚ್ಚಿಸಬೇಕು ಅಂತ ತುಮಕೂರಿನ ಪಟ್ಟನಾಯಕನಹಳ್ಳಿ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ ಬೇಡಿಕೆ ಇಟ್ಟಿದ್ದಾರೆ. ಹಾಗೂ ಅದಕ್ಕೆ ಜನವರಿ 23ರವರೆಗೆ ಗಡುವುನ್ನ ನೀಡಿದ್ದಾರೆ. ಗಡುವು ಮುಗಿಯೊದರಳೊಗೆ ಮೀಸಲಾತಿ ಘೋಷಿಸಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುತ್ತೆ ಅಂತ ಎಚ್ಚರಿಕೆ ನೀಡಿದ್ದಾರೆ. ಇನ್ನು ಸಭೆಯಲ್ಲಿ ಮಾತಾಡಿದ ಕೆಪಿಸಿಸಿ ಅಧ್ಯಕ್ಷ, ವಿಧಾನಸೌಧಕ್ಕೆ ತೆಗೆದುಕೊಂಡು ಹೋಗಿ ಕೂರಿಸೊ ತಾಕತ್ತು ನಿಮಗಿದೆ. ಸಮುದಾಯದ ಆಶೀರ್ವಾದ ನನ್ನ ಮೇಲಿರಲಿ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply