PM ಮೋದಿಗೆ ಪತ್ರ ಬರೆದ ಸೋನಿಯಾ ಗಾಂಧಿ!

masthmagaa.com:

ಕೇಂದ್ರ ಸರ್ಕಾರ ಸಂಸತ್ತಿನ ವಿಶೇಷ ಅಧಿವೇಶನ ಕರೆದಿರುವ ಹಿನ್ನಲೆಯಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ 6 ಅಂಶಗಳಿಗೆ ಸಂಬಂಧಿಸಿದಂತೆ ವಿಶೇಷ ಅಧಿವೇಶನದಲ್ಲಿ ಚರ್ಚೆ ನಡೆಸುವಂತೆ ಮನವಿ ಮಾಡಿದ್ದಾರೆ. ಅಲ್ದೆ ಬೇರೆ ರಾಜಕೀಯ ಪಕ್ಷಗಳೊಂದಿಗೆ ಯಾವುದೇ ಸಮಾಲೋಚನೆಯಿಲ್ಲದೆ ಈ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ನಮ್ಮಲ್ಲಿ ಯಾರಿಗೂ ಅದರ ಕಾರ್ಯಸೂಚಿಯ ಬಗ್ಗೆ ಯಾವುದೇ ಕಲ್ಪನೆ ಇಲ್ಲ. ಹೀಗಾಗಿ ವಿಶೇಷ ಅಧಿವೇಶನದಲ್ಲಿ ತಾವು ಪಟ್ಟಿ ಮಾಡಿರುವ ವಿಷಯಗಳನ್ನು ತೆಗೆದುಕೊಳ್ಳಲಾಗುವುದು ಅಂತ ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

-masthmagaa.com

Contact Us for Advertisement

Leave a Reply