ರಾಜ್ಯದ ಹಲವೆಡೆ ಭಾರಿ ಮಳೆ.. ಈ ಜಿಲ್ಲೆಗಳಲ್ಲಿ ಅಲರ್ಟ್​ ಘೋಷಣೆ

masthmagaa.com:

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಇವತ್ತು ಧಾರಾಕಾರ ಮಳೆಯಾಗಿದೆ. ಬೆಂಗಳೂರಿನಲ್ಲೂ ಜಿಟಿಜಿಟಿ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ – KSNDMC ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಅಂತಾನೂ ಹೇಳಿದೆ. ಜೊತೆಗೆ ಭಾರತೀಯ ಹವಾಮಾನ ಇಲಾಖೆ- IMD ಕೆಲವೊಂದು ಜಿಲ್ಲೆಗಳಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಯಾವ್ಯಾವ ಜಿಲ್ಲೆಯಲ್ಲಿ ಅಂತ ನೋಡೋದಾದ್ರೆ..
ಆರೆಂಜ್ ಅಲರ್ಟ್​ (115.6+ ಮಿ.ಮೀ. ಮಳೆ)
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ)
ಯೆಲ್ಲೋ ಅಲರ್ಟ್ (64.5+ ಮಿ.ಮೀ. ಮಳೆ)
ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಬೀದರ್, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ತುಮಕೂರು
ಅತ್ತ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ಹಲವೆಡೆಯೂ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲಿ ಮೊನ್ನೆ ಮೇಘಸ್ಫೋಟ ಸಂಭವಿಸಿ ದಿಢೀರ್ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ 6 ಜನರ ಮೃತದೇಹಗಳು ಪತ್ತೆಯಾಗಿದೆ. ಇಲ್ಲಿವರೆಗೆ ಒಟ್ಟು 8 ಮೃತದೇಹ ಸಿಕ್ಕಂತಾಗಿದೆ. ಇನ್ನೂ ಹಲವರು ನಾಪತ್ತೆಯಾಗಿದ್ದಾರೆ. ಮೃತಪಟ್ಟವರ ಕುಟುಂಬಗಳಿಗೆ ಹಿಮಾಚಲ ಪ್ರದೇಶ ಸರ್ಕಾರ ತಲಾ 4 ಲಕ್ಷ ಪರಿಹಾರ ಘೋಷಿಸಿದೆ.

-masthmagaa.com

Contact Us for Advertisement

Leave a Reply