ಆಹಾರ ಧಾನ್ಯಗಳ ಸಂಗ್ರಹ ಸಾಮರ್ಥ್ಯ ಹೆಚ್ಚಿಸಲು ನಿರ್ಧರಿಸಿದ ಕೇಂದ್ರ ಸರ್ಕಾರ!

masthmagaa.com:

ದೇಶದಲ್ಲಿ ಆಹಾರ ಧಾನ್ಯಗಳ ಸಂಗ್ರಹ ಸಾಮರ್ಥ್ಯವನ್ನ 7 ಕೋಟಿ ಟನ್‌ಗಳಷ್ಟು ಹೆಚ್ಚಿಸುವ ಒಂದು ಲಕ್ಷ ಕೋಟಿ ರೂಪಾಯಿ ಮೊತ್ತದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಯೋಜನೆ ಅವಧಿ 5 ವರ್ಷಗಳಾಗಿದ್ದು, ಸಹಕಾರ ಕ್ಷೇತ್ರದಲ್ಲಿ ಅನುಷ್ಠಾನ ಆಗಲಿರುವ ವಿಶ್ವದಲ್ಲಿಯೇ ಅತಿದೊಡ್ಡ ಆಹಾರ ಧಾನ್ಯ ಸಂಗ್ರಹ ಯೋಜನೆಯಾಗಿದೆ ಅಂತ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ತಿಳಿಸಿದ್ದಾರೆ. ಇದೇ ವೇಳೆ ಈ ಯೋಜನೆ ಅಡಿಯಲ್ಲಿ ಪ್ರತಿ ತಾಲೂಕು ಮಟ್ಟದಲ್ಲಿ 2 ಸಾವಿರ ಟನ್‌ ಸಂಗ್ರಹ ಸಾಮರ್ಥ್ಯದ ಉಗ್ರಾಣವನ್ನ ನಿರ್ಮಿಸಲಾಗುತ್ತೆ ಅಂತ ಮಾಹಿತಿ ನೀಡಿದ್ದಾರೆ.

-masthmagaa.com

Contact Us for Advertisement

Leave a Reply